Home ಕರಾವಳಿ ಬಂಟ್ವಾಳ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ವ್ಯಕ್ತಿಯೋರ್ವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿರುವ ಘಟನೆ ಪಾಣೆಮಂಗಳೂರು ಸಮೀಪದ ನಂದಾವರ ಸೇತುವೆ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. 

ತಾಲೂಕಿನ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಸಣ್ಣ ಪುಟ್ಟ ಖಾಯಿಲೆಯಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

Join Whatsapp
Exit mobile version