Home ಟಾಪ್ ಸುದ್ದಿಗಳು ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

ಹಾವೇರಿ: ಹೆಂಡತಿಯನ್ನು ಕೊಲೆ ಮಾಡಿದ ಪತಿ ಬಳಿಕ ತಾನೂ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದಲ್ಲಿ ನಡೆದಿದೆ.


ದ್ರಾಕ್ಷಾಣೆವ್ವ (45) ಎಂಬಾಕೆಯನ್ನು ಆಕೆಯ ಪತಿ ಪ್ರಭು ವಾರತಿ (52) ಎಂಬಾತ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ತನ್ನ ಹೆಂಡತಿಯ ಮೇಲೆ ಅನುಮಾನ ಪಡುತ್ತಿದ್ದ ಕಾರಣ ಪ್ರತಿದಿನ ಮನೆಯಲ್ಲಿ ಜಗಳ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.


ಮಂಗಳವಾರ ಇದೇ ರೀತಿ ಜಗಳ ಆಡುತ್ತಿದ್ದ ಸಂದರ್ಭ ಇವರ ಜಗಳ ಅತಿರೇಕಕ್ಕೆ ಹೋಗಿ ಇಬ್ಬರ ನಡುವೆ ಹೊಡೆದಾಟ ಪ್ರಾರಂಭವಾಗಿದೆ. ಈ ವೇಳೆ ಗಂಡ ಮಚ್ಚಿನಿಂದ ಹೆಂಡತಿಯನ್ನು ಹತ್ಯೆ ಮಾಡಿದ್ದು, ಬಳಿಕ ತಾನೂ ಮನೆಯ ಮುಂದೆ ನೇಣಿಗೆ ಶರಣಾಗಿದ್ದಾನೆ.
ಹಾವೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version