ಶಾಸಕ ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

Prasthutha|

ಕಲಬುರಗಿ: ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲೇ ವಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ದೇವಪ್ಪ(35) ಮೃತರು ಎಂದು ಗುರುತಿಸಲಾಗಿದೆ.

ಕಲಬುರಗಿಯ ಶರಣನಗರದಲ್ಲಿರುವ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿ ಶವ ಇಂದು (ಆಗಸ್ಟ್ 24) ಪತ್ತೆಯಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬ್ರಹ್ಮಪುರ ಪೊಲೀಸರು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.



Join Whatsapp