ಕಡಬ: ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಎಂಬಲ್ಲಿ ನಡೆದಿದ್ದು, ಡಿಕ್ಕೆ ಹೊಡೆದ ವಾಹನ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ದನ ಸಾಗಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎಂದು ಪ್ರತಿಭನೆ ನಡೆಸಲಾಗಿದೆ. ಉದ್ವಗ್ನ ವಾತಾವರಣ ನಿರ್ಮಾಣ ಆಗಿತ್ತು.
ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತ ವ್ಯಕ್ತಿ. ವಿಠಲ ರೈ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದು ನಿಲ್ಲಿಸದೇ ಸಾಗಿದೆ.
ಬಳಿಕ ಕಾರು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ.ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ಪತ್ತೆಯಾಗಿದೆ. ಚಾಲಕ ಪರಾರಿಯಾಗಿದ್ದಾನೆ.
ಕಾರಿನಲ್ಲಿ ಅಕ್ರಮವಾಗಿ ದನ ಸಾಗಿಸಲಾಗುತ್ತಿತ್ತು, ಅಕ್ರಮ ದನ ಸಾಗಾಟದ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಕಡಬ ಆಸ್ಪತ್ರೆಯ ಬಳಿ ಸ್ಥಳೀಯರ ಪ್ರತಿಭಟನೆ ನಡೆಸಿದ್ದಾರೆ. ತಕ್ಷಣ ದ.ಕ ಜಿಲ್ಲಾ ಎಸ್ಪಿ ಸ್ಥಳಕ್ಕೆ ಬರಬೇಕು ಅಂತ ಪ್ರತಿಭಟನಕಾರರ ಪಟ್ಟು ಹಿಡಿದಿದ್ದಾರೆ ಕಡಬ ಸರಕಾರಿ ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳಿಂದಲೂ ಪ್ರತಿಭಟನೆ ನಡೆದಿದೆ.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.