Home ಕರಾವಳಿ ಮಂಗಳೂರು:‌ ಮೋರಿ ದಾಟುವಾಗ ಮಳೆ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಮಂಗಳೂರು:‌ ಮೋರಿ ದಾಟುವಾಗ ಮಳೆ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಮೃತ ಸುರೇಶ್ ಗಟ್ಟಿ‌

ಉಳ್ಳಾಲ:  ಮೋರಿ ದಾಟುವಾಗ ಮಳೆ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52) ಎಂದು ಗುರುತಿಸಲಾಗಿದೆ.

ಮನೆ ಸಮೀಪದ ಮೋರಿ‌ ದಾಟುವ ಸಂದರ್ಭ ಸುರೇಶ್ ಗಟ್ಟಿ‌ ಆಯತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ವೃತ್ತಿಯಲ್ಲಿ ಪೈಂಟರ್ ಆಗಿರುವ ಅವರು ಕೆಲಸ ಮುಗಿಸಿ ಇಂದು ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನ ಪಕ್ಕದ ಮನೆಯ ಮಾಜಿ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯ ಪ್ರೇಮಾನಂದ ಮತ್ತು ಅವರ ಸಂಬಂಧಿ ಧನರಾಜ್ ಅವರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಸುರೇಶ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version