ಚಂಡೀಗಢ: ಹನುಮ ವೇಷಧಾರಿಯೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ.
ಮೃತರನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದೆ.
ಇವರು ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಲೀಲಾ ಸ್ಕಿಟ್ ಹಮ್ಮಿಕೊಳ್ಳಲಾಗಿತ್ತು. ಸ್ಕಿಟ್ ಮಾಡ್ತಿದ್ದಂತೆಯೇ ಹರೀಶ್ ಮೆಹ್ತಾ ಏಕಾಏಕಿ ಕುಸಿದು ಬಿದ್ದರು. ಆದರೆ ಪ್ರೇಕ್ಷಕರು ಮಾತ್ರ ಇದು ಸ್ಕಿಟ್ ಭಾಗವೆಂದು ಭಾವಿಸಿ ಕೂಡಲೇ ಯಾರೂ ರಕ್ಷಣೆಗೆ ಬರಲಿಲ್ಲ. ಆದರೆ ಕೆಲಹೊತ್ತಾದರೂ ಮೆಹ್ತಾ ಅವರು ಎದ್ದೇಳಲೇ ಇಲ್ಲ. ಇದರಿಂದ ಆತಂಕಗೊಂಡ ಜನ ತಕ್ಷಣವೇ ಕಾರ್ಯಪ್ರವೃತ್ತರಾದರು. ಕೂಡಲೇ ಸ್ಥಳೀಯರು ಮೆಹ್ತಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಅವರಿಗೆ ಹೃದಯಾಘಾತವಾಗಿರುವುದಾಗಿ ವೈದರು ಹೇಳಿದ್ದಾರೆ.