ಇಬ್ಬರನ್ನು ಬಲಿ ಪಡೆದ ನರಭಕ್ಷಕ ಚಿರತೆ ಸೆರೆ

Prasthutha|

ಮೈಸೂರು: ತಿ.ನರಸೀಪುರ ತಾಲೂಕು ಸೋಸಲೆ ಹೋಬಳಿಯಲ್ಲಿ ಇತ್ತೀಚೆಗೆ ಬಾಲಕ ಹಾಗೂ ವೃದ್ಧೆಯನ್ನು ಬಲಿ ಪಡೆದ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

- Advertisement -


ಬಲಿ ಪಡೆದ ಪ್ರದೇಶಗಳಲ್ಲಿ ಸುಮಾರು 19 ಬೋನ್ ಗಳನ್ನು ಇರಿಸಲಾಗಿತ್ತು. ಜತೆಗೆ ಇಪತ್ತಕ್ಕೂ ಹೆಚ್ಚು ಕ್ಯಾಮೆರಾ ಟ್ರ್ಯಾಪ್ ಅಳವಡಿಸಲಾಗಿತ್ತು. ಥರ್ಮಲ್ ಡ್ರೋನ್ ಕ್ಯಾಮೆರಾ ಬಳಸಿ ಚಿರತೆ ಅಡಗು ತಾಣ ಪತ್ತೆ ಹಚ್ವಿದ್ದ ಇಲಾಖೆ, ಆ ಸ್ಥಳದಲ್ಲಿ ತುಮಕೂರಿನಿಂದ ತರಿಸಿದ್ದ ದೊಡ್ಡ ಬೋನ್ ಅಳವಡಿಸಲಾಗಿತ್ತು.


ಹೊರಳಹಳ್ಳಿ ಬಳಿ ನಿನ್ನೆ ರಾತ್ರಿ ಬೋನ್ ನಲ್ಲಿ ಹೊರಳಹಳ್ಳಿ ಬಳಿ ಚಿರತೆ ಸೆರೆ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -


ಜ.20 ರಂದು ಕನ್ನಾಯಕನಹಳ್ಳಿಯಲ್ಲಿ ವೃದ್ಧೆಯನ್ನು ಬಲಿ ಪಡೆದಿದ್ದ ಚಿರತೆ ಮರುದಿನ ಸಂಜೆ ಹೊರಳಹಳ್ಳಿ ಬಳಿ ಬಾಲಕನ ಮೇಲೆ ದಾಳಿ ಮಾಡಿ ಕೊಂದಿದ್ದಲ್ಲದೇ, ಅರ್ಧ ದೇಹವನ್ನು ತಿಂದಿತ್ತು. ಘಟನೆಯನ್ನು ಗಂಭಿರವಾಗಿ ಪರಿಗಣಿಸಿದ್ದ ಸರ್ಕಾರ ಚಿರತೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆಯೂ ಅಧಿಕಾರಿಗಳಿಗೆ ಸೂಚಿಸಿತ್ತು.



Join Whatsapp