Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಪುನರ್ ಸ್ಥಾಪನೆಯನ್ನು ಪ್ರಶ್ನಿಸಿದ್ದ ವ್ಯಕ್ತಿಗೆ ದಂಡ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಪುನರ್ ಸ್ಥಾಪನೆಯನ್ನು ಪ್ರಶ್ನಿಸಿದ್ದ ವ್ಯಕ್ತಿಗೆ ದಂಡ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಸಂಸತ್‌ ಸದಸ್ಯತ್ವ ಪುನರ್‌ ಸ್ಥಾಪಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮಾತ್ರವಲ್ಲ, ಅರ್ಜಿದಾರ ವಕೀಲ ಅಶೋಕ್‌ ಪಾಂಡೆ ಅವರಿಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದೆ. ಅರ್ಜಿ ಸಲ್ಲಿಕೆಯು ನ್ಯಾಯಸಮ್ಮತವಾಗಿಲ್ಲ ಎಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಹೇಳಿದೆ.

2019ರಲ್ಲಿ ಮೋದಿ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು. ಗುಜರಾತ್‌ನ ಬಿಜೆಪಿ ನಾಯಕ ಪೂರ್ಣೇಶ್‌ ಮೋದಿ ದಾಖಲಿಸಿದ್ದ ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್‌ನ ಚೀಫ್‌ ಜುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ರಾಹುಲ್‌ ಗಾಂಧಿಯನ್ನು ಅಪರಾಧಿ ಎಂದು ತೀರ್ಪು ನೀಡಿದ್ದರು. ಇದಕ್ಕೆ ಸು‍ಪ್ರೀಂ ಕೋರ್ಟ್ ತಡೆ ನೀಡಿತ್ತು. ಬಳಿಕ ಲೋಕಸಭಾ ಸಚಿವಾಲಯವು ರಾಹುಲ್‌ ಸಂಸತ್‌ ಸದಸ್ಯತ್ವವನ್ನು ಪುನರ್‌ ಸ್ಥಾಪಿಸಿತ್ತು.

Join Whatsapp
Exit mobile version