ಮಧ್ಯಪ್ರದೇಶ : ಆಸ್ಪತ್ರೆಯಲ್ಲಿ ದಾಖಲಾಗಿದ್ದಾತನಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ; ಬಂಧನ

Prasthutha: June 12, 2021

ಭೋಪಾಲ್‌ : ಮಧ್ಯಪ್ರದೇಶದ ಆಸ್ಪತ್ರೆಯೊಂದರಲ್ಲಿ ರೋಗಿಯೊಬ್ಬರಿಗೆ ಬೆಂಕಿ ಹಚ್ಚಿ ಜೀವಂತ ದಹನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮೊದಲು ಆರೋಪಿಯು ರೋಗಿಗೆ ಹಲ್ಲೆ ಮಾಡಿ ಗಾಯಗೊಳಿಸಿದ್ದ, ಹೀಗಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದ.

ಬೆಂಕಿಯಿಂದ ಗಂಭೀರ ಗಾಯಗೊಂಡ ಗಾಯಾಳು ದಾಮೋದರ್‌ ಕೋರಿಯನ್ನು ಈಗ ಸಾಗರದ ಬುಂದೇಲ್‌ ಖಂಡ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪ್ರಾಣಾಪಾಯದಿಂದ ಆತ ಪಾರಾಗಿದ್ದಾನೆ.

ಆರೋಪಿ ಮಿಲನ್‌ ರಜಕ್‌ ಎಂಬಾತ ಆಸ್ಪತ್ರೆಯಲ್ಲಿ ಲೈಟರ್‌ ಹಿಡಿದು ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಕೋರಿ ಬಳಿ ಹೋದ ರಜಕ್‌, ಆತನಿಗೆ ಬೆಂಕಿ ಹಚ್ಚಿರುವ ದೃಶ್ಯವೂ ಸಿಸಿಟಿವಿಯಲ್ಲಿ ದಾಖಲಾಗಿದೆ. ರಜಕ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.   

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ