ಇಂಫಾಲ್: ಮಣಿಪುರ ವಿಶ್ವವಿದ್ಯಾಲಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಒಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ.
ಶುಕ್ರವಾರ ಸಂಜೆ ವಿಶ್ವವಿದ್ಯಾಲಯದ ಆವರಣದೊಳಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ಐಇಡಿ (ಸುಧಾರಿತ ಸ್ಫೋಟಕಗಳು) ಸಾಮಗ್ರಿ ಬಳಕೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.