ಪತ್ನಿ, ಅತ್ತೆ ಕೊಂದು ಪೊಲೀಸರಿಗೆ ಶರಣಾದ ಆರೋಪಿ

Prasthutha|

ವಿಜಯಪುರ: ಪತಿಯೇ ತನ್ನ ಪತ್ನಿ ಹಾಗೂ ಆಕೆಯ ತಾಯಿಯನ್ನು ಕೊಲೆ ಮಾಡಿರುವ ಘಟನೆ ವಿಜಯಪುರ ನಗರದ ನವಬಾಗ್ ಪ್ರದೇಶದಲ್ಲಿ ವರದಿಯಾಗಿದೆ.

- Advertisement -


ರೂಪಾ ಮೇತ್ರಿ (32) ಹಾಗೂ ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆ ಆರೋಪಿ.


ನವಭಾಗ್ ಪ್ರದೇಶದ ಭಾಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದ್ದ ಮಲ್ಲಿಕಾರ್ಜುನ ಮೂವರು ಮಕ್ಕಳು, ಪತ್ನಿ ಹಾಗೂ ಅತ್ತೆಯೊಂದಿಗೆ ವಾಸವಿದ್ದನು. ಕಳೆದ ಆರು ತಿಂಗಳಿಂದ ನವಭಾಗ್ ಪ್ರದೇಶದಲ್ಲಿ ಈ ಕುಟುಂಬ ನೆಲೆಸಿತ್ತು. ಪತ್ನಿ ತನ್ನ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಮನೆ ಕೆಲಸ ಮಾಡುತ್ತಿಲ್ಲ. ಮಹಿಳಾ ಹಾಗೂ ವಿವಿಧ ಸಂಘಟನೆಗಳ ಕೆಲಸದ ಕಾರಣ ಸದಾ ಮನೆಯಾಚೆ ಇರುತ್ತಾಳೆ ಎಂದು ಕೋಪಗೊಂಡಿದ್ದಾನೆ. ಇದರಿಂದ ರೋಸಿ ಹೋಗಿದ್ದ ಆರೋಪಿ ಇಂದು ಬೆಳಗಿನ ಜಾವ ಮಲಗಿದ್ದ ಪತ್ನಿ ಹಾಗು ಅತ್ತೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.