Home ಟಾಪ್ ಸುದ್ದಿಗಳು ಪ್ರೀತಿ ನಿರಾಕರಿಸಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯನ್ನು ಹತ್ಯೆಗೈದ ಯುವಕ

ಪ್ರೀತಿ ನಿರಾಕರಿಸಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯನ್ನು ಹತ್ಯೆಗೈದ ಯುವಕ

ದಾವಣಗೆರೆ: ಕೆಲಸಕ್ಕೆ ಹೋಗುತ್ತಿದ್ದ ಯುವತಿಯನ್ನು ನಡು ರಸ್ತೆಯಲ್ಲಿ ತಡೆದು ನಿಲ್ಲಿಸಿ ಯುವಕನೋರ್ವ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.


ನಗರದ ಬಿ.ಜೆ. ಬಡಾವಣೆಯ ಚರ್ಚ್ ಮುಂಭಾಗ ಯುವತಿಯನ್ನು ಕೊಲೆ ಮಾಡಿದ ಯುವಕ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾನೆ.
ವಿನೋಭ ನಗರದ ನಿವಾಸಿ ಚಾಂದ್ ಸುಲ್ತಾನಾ ದಾವಣಗೆರೆ ವಿವಿಯಲ್ಲಿ ಎಂಕಾಂ ಪದವಿ ಮುಗಿಸಿ ತೆರಿಗೆ ಸಲಹೆಗಾರರಾದ ಕೆ.ಮುಹಮ್ಮದ್ ಭಾಷಾ ಅವರ ಬಳಿ ಸಿ.ಎ.ಗಾಗಿ ತರಬೇತಿ ಪಡೆಯುತ್ತಿದ್ದಳು. ಇದೇ ಕಚೇರಿಯಲ್ಲಿನ ಹುಡುಗನ ಜೊತೆಗೆ ಇತ್ತೀಚಿಗೆ ನಿಶ್ಚಿತಾರ್ಥ ಸಹ ಮಾಡಿಕೊಂಡಿದ್ದಳು. ಅಷ್ಟರಲ್ಲೇ ಸಾದತ್ ಅಲಿಯಾಸ್ ಚಾಂದ್ ಫೀರ್ ಎಂಬಾತ, ಚಾಂದ್ ಸುಲ್ತಾನಾಳನ್ನು ಮದುವೆಯಾಗಲು ಬಯಸಿದ್ದ ಎನ್ನಲಾಗಿದೆ.


ಆದರೆ ಕುಟುಂಬದ ಸದಸ್ಯರು ಹಾಗೂ ಸುಲ್ತಾನಾ ಆತನ ಬೇಡಿಕೆಯನ್ನು ನಿರಾಕರಿಸಿ ಮತ್ತೊಬ್ಬ ಹುಡುಗನ ಜೊತೆಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಸಾದಾತ್ ಕೋಪಗೊಂಡಿದ್ದ ಎನ್ನಲಾಗಿದೆ. ಮರುದಿನ ಸುಲ್ತಾನ ಕೆಲಸಕ್ಕೆ ಹೋಗುತ್ತಿದ್ದಾಗ ಮಾತನಾಡಬೇಕು ಎಂದು ನಿಲ್ಲಿಸಿ, ನಡು ರಸ್ತೆಯಲ್ಲೇ ಹಾಡಹಗಲೇ ಚಾಕುವಿನಿಂದ ಚುಚ್ಚಿ ಕೊಂದಿದ್ದಾನೆ.
ಕುಟುಂಬದವರಿಗೆ ಕೊಲೆಯ ವಿಚಾರ ತಿಳಿದು, ಕೊಲೆಗಾರನನ್ನು ಹುಡುಕಾಡುವಷ್ಟರಲ್ಲೇ ಸಾದಾತ್ ವಿಷ ಸೇವಿಸಿ ಸಿಟಿ ಸೆಂಟ್ರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಸದ್ಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version