ಮದುವೆ ಮನೆಯಲ್ಲಿ ‘ಜೈಶ್ರೀರಾಮ್’ ಘೋಷಣೆ ಕೂಗುತ್ತಾ ಗುಂಡಿಕ್ಕಿದ ಸಂಘಪರಿವಾರದ ಕಾರ್ಯಕರ್ತರು: ಓರ್ವ ಸಾವು!

Prasthutha: December 14, 2021

ಭೋಪಾಲ್: ಸಂಘಪರಿವಾರದ ಕಾರ್ಯಕರ್ತರು ಮದುವೆ ಸಮಾರಂಭವೊಂದರಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪೈಶಾಚಿಕ ಕೃತ್ಯವೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಮಾಜಿ ಸರಪಂಚ್ ದೇವಿಲಾಲ್ ಮೀನಾ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳ ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ದೇವಿಲಾಲ್ ರನ್ನು ತಕ್ಷಣ ರಾಜಸ್ಥಾನದ ಕೋಟಾದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜೈಲಿನಲ್ಲಿರುವ ಸ್ವಯಂ ಘೊಷಿತ ದೇವಮಾನವ ರಾಂಪಾಲ್ ಅವರ ಅನುಯಾಯಿಗಳು ಆಯೋಜಿಸಿದ್ದ ಮದುವೆ ಸಮಾರಂಭದಲ್ಲಿ ಈ ದಾಳಿ ನಡೆದಿದೆ. ಹರಿಯಾಣ ಮೂಲದ ರಾಂಪಾಲ್, ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಆರು ಜನರನ್ನು ಕೊಂದ ಆರೋಪದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ರಾಮೈಣಿ ಎಂಬ ಹೆಸರಿನಲ್ಲಿ ಕೇವಲ 17 ನಿಮಿಷಗಳ ಕಾಲ ನಡೆಯುವ ಈ ವಿನೂತನ ಮದುವೆಯು ಹಿಂದೂ ವಿರೋಧಿ ಸಂಸ್ಕೃತಿಯಾಗಿದೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ ಎಂದು ರಾಮ್‌ಪಾಲ್ ಅವರ ಅನುಯಾಯಿಗಳು ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ ನಾಯಕ ಶೈಲೇಂದ್ರ ಓಜಾ ದಾಳಿಯ ನೇತೃತ್ವ ವಹಿಸಿದ್ದರು ಎಂದು ಆರೋಪಿಸಲಾಗಿದೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!