ಮಾರ್ಕೆಟ್’ನಲ್ಲಿ ಚಾಕು ಹಿಡಿದು ಜನರನ್ನು ಹೆದರಿಸಿದ ವ್ಯಕ್ತಿಗೆ ಪೊಲೀಸರಿಂದ ಗುಂಡೇಟು

Prasthutha|

ಕಲಬುರಗಿ: ಕಲಬುರಗಿ ನಗರದ ಸೂಪರ್ ಮಾರ್ಕೆಟ್’ನಲ್ಲಿ ಭಾನುವಾರ ರಾತ್ರಿ ಚಾಕು ಹಿಡಿದು ಜನರನ್ನು ಬೆದರಿಸುತ್ತಿ ದುಷ್ಕರ್ಮಿಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿ, ಆತನನ್ನು ಬಂಧಿಸಿದ್ದಾರೆ.

- Advertisement -


ಕಾಲಿಗೆ ಗುಂಡು ತಗುಲಿ ಗಾಯಗೊಂಡ ಅಬ್ದುಲ್ಲಾ ಜಾಫರ್ ಸಾಬ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.


ಜಾಫರ್ ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ಚೂರಿ ಹಿಡಿದು ರಸ್ತೆಯಲ್ಲಿ ತಿರುಗಾಡುತ್ತಾ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಶರಣಾಗುವಂತೆ ಸೂಚಿಸಿದರೂ ಆತ ಪೊಲೀಸರ ಮಾತಿಗೆ ಕಿವಿಗೊಡಲಿಲ್ಲ. ಪರಿಸ್ಥಿತಿಯನ್ನು ಅರಿತ ಪಿಎಸ್’ಐ ವಾಹಿದ್ ಕೊತ್ವಾಲ್ ಅವರು ಮೂರು ಸುತ್ತು ಗುಂಡು ಹಾರಿಸಿದರು. ಕೊನೆಯ ಗುಂಡು ಆತನ ಕಾಲಿಗೆ ತಗುಲಿದ್ದರಿಂದ ಅಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಆರೋಪಿಯನ್ನು ಸುತ್ತುವರೆದ ಪೊಲೀಸರು ಆತನಿಗೆ ಲಾಠಿಯಿಂದ ಥಳಿಸಿ, ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Join Whatsapp