ನವದೆಹಲಿ | ನಡುಬೀದಿಯಲ್ಲೇ ವಿದ್ಯಾರ್ಥಿಯ ಕೊಲೆ; ವೀಡಿಯೋ ವೈರಲ್

Prasthutha|

ನವದೆಹಲಿ: ಹೋಟೆಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿಯೋರ್ವನನ್ನು ಸಾರ್ವಜನಿಕರ ಸಮ್ಮುಖದಲ್ಲೇ ನಡುಬೀದಿಯಲ್ಲಿ ಇರಿದು ಕೊಂದಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.

- Advertisement -

ಘಟನೆಗೆ ಸಂಬಂಧಿಸಿದ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

ದಕ್ಷಿಣ ದೆಹಲಿಯ ಮಾಳವೀಯ ನಗರದ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಮಯಾಂಕ್ ಎಂಬ ವಿದ್ಯಾರ್ಥಿ ತನ್ನ ಸ್ನೇಹಿತನೊಂದಿಗೆ ಮಾರುಕಟ್ಟೆಯಲ್ಲಿದ್ದಾಗ ನಾಲ್ಕೈದು ಜನರು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ವಿದ್ಯಾರ್ಥಿ ಮಯಾಂಕ್ ಹಲ್ಲೆಕೋರರಿಂದ ರಕ್ಷಣೆ ಪಡೆಯಲು ರಸ್ತೆಯುದ್ದಕ್ಕೂ ಓಡುತ್ತಿರುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆನ್ನುಬಿಡದ ದಾಳಿಕೋರರು ಚಾಕುವಿನಿಂದ ಆತನ ಮೇಲೆ ಹಲವು ಸಲ ಇರಿದು ಹತ್ಯೆ ನಡೆಸಿದ್ದಾರೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಮಯಾಂಕ್ ನನ್ನು ಸಾರ್ವಜನಿಕರ ನೆರವಿನಿಂದ ದೆಹಲಿಯ AIIMS ಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಹಂತಕರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.




Join Whatsapp