ರಾಜಸ್ಥಾನದಲ್ಲಿ ವ್ಯಕ್ತಿಯ ಇರಿದು ಕೊಲೆ: 24 ಗಂಟೆ ಇಂಟರ್ನೆಟ್ ಸೇವೆ ಸ್ಥಗಿತ

Prasthutha|

ಜೈಪುರ: ರಾಜಸ್ಥಾನದಲ್ಲಿ 20 ವರ್ಷದ ವ್ಯಕ್ತಿಯನ್ನು ಮತ್ತೊಂದು ಸಮುದಾಯದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದು ಕೊಂದಿರುವ ಘಟನೆಗೆ ಸಂಬಂಧಿಸಿದಂತೆ  ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 24 ಗಂಟೆಗಳ ಕಾಲ ಅಮಾನತುಗೊಳಿಸಲಾಗಿದೆ.

- Advertisement -

ಭಿಲ್ವಾರದ ಶಾಸ್ತ್ರಿನಗರದ ನಿವಾಸಿ ಆದರ್ಶ್ ತಪ್ಡಿಯಾ ಅವರ ಮೇಲೆ ಅನ್ಯ ಸಮುದಾಯದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 10 ರಂದು ತಡರಾತ್ರಿ ಸಂಭವಿಸಿದ ಘಟನೆಯ ವಿರುದ್ಧ ಪ್ರತಿಭಟನೆಯಾಗಿ ಬಲಪಂಥೀಯ ಗುಂಪುಗಳು ತಮ್ಮ ಅಂಗಡಿಗಳನ್ನು ಮುಚ್ಚುವಂತೆ ವ್ಯಾಪಾರಿಗಳಿಗೆ ಕರೆ ನೀಡಿವೆ.

- Advertisement -

ಆದ್ದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಪ್ರದೇಶದಲ್ಲಿ ನಿಯೋಜಿಸಲಾಗಿದ್ದು, ಸುಳ್ಳು ಮಾಹಿತಿಯ ಹರಡುವಿಕೆಯನ್ನು ತಡೆಯುವ ಸಲುವಾಗಿ ಭಿಲ್ವಾರಾ ನಗರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp