Home ಟಾಪ್ ಸುದ್ದಿಗಳು ಕಡಬ | ಆತ್ಮಹತ್ಯೆಗೆ ಯತ್ನ: ಕುಮಾರಧಾರಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಕಡಬ | ಆತ್ಮಹತ್ಯೆಗೆ ಯತ್ನ: ಕುಮಾರಧಾರಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ನಡುವೆ ಕುಮಾರಧಾರಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳದ ಪುಳಿಕುಕ್ಕು ಬಳಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.


ರವಿಕುಮಾರ್ ಅವರು ನದಿ ಮಧ್ಯೆ ಪೊದೆ ಹಿಡಿದುಕೊಂಡು ನಿಂತಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಈ ವಿಚಾರವನ್ನು ಕೂಡಲೇ ಅವರು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಕಡಬ ಎಸ್ ಐ ಅಭಿನಂದನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ

Join Whatsapp
Exit mobile version