ಅಮೆರಿಕ ಅಧ್ಯಕ್ಷ ಜೋ ಬೈಡನ್, ಕಮಲಾ ಹ್ಯಾರಿಸ್​ಗೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಹತ್ಯೆ

Prasthutha|

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಹಾಗೂ ಕಮಲಾ ಹ್ಯಾರಿಸ್​ಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಹತ್ಯೆ ಮಾಡಿದೆ.

- Advertisement -

ಸಾಲ್ಟ್ ಲೇಕ್ ಸಿಟಿಯ ದಕ್ಷಿಣದ ಪ್ರೊವೊದಲ್ಲಿರುವ ಕ್ರೆಹ್ ಡೆಲೆವ್ ರಾಬರ್ಟ್‌ಸನ್ ಹತ್ಯೆಯಾದ ವ್ಯಕ್ತಿ. ರಾಬರ್ಟ್‌ಸನ್ ಮನೆಯಲ್ಲಿ ಬೆಳಗ್ಗೆ 6.15 ಕ್ಕೆ ಗುಂಡಿನ ದಾಳಿ ನಡೆದಿದೆ ಎಂದು ಎಫ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ.

ರಾಬರ್ಟ್‌ಸನ್ ಆನ್‌ಲೈನ್‌ನಲ್ಲಿ ಬೆದರಿಕೆ ಹಾಕಿದ್ದ. ಎಫ್‌ಬಿಐ ಏಜೆಂಟ್‌ಗಳು ಶೋಧ ವಾರಂಟ್ ನೀಡಿ ಬಂಧಿಸಲು ಪ್ರಯತ್ನಿಸುತ್ತಿದ್ದಾಗ ಗುಂಡಿನ ದಾಳಿ ಸಂಭವಿಸಿದೆ. ಹೆಚ್ಚಿನ ವಿವರಗಳನ್ನು ನೀಡಲು ಎಫ್‌ಬಿಐ ನಿರಾಕರಿಸಿದೆ.

- Advertisement -

ಗುಂಡಿನ ದಾಳಿ ಸಂದರ್ಭದಲ್ಲಿ ರಾಬರ್ಟ್​ಸನ್ ಶಸ್ತ್ರಸಜ್ಜಿತನಾಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಕುರಿತು ಎಫ್​ಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಆತ ಜೋ ಬೈಡನ್ ಮತ್ತು ಕಮಲಾ ಹ್ಯಾರಿಸ್ ಅವರನ್ನು ಕೊಲೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದ.



Join Whatsapp