ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

Prasthutha|

ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಂಜು ಶರ್ಮಾ (41) ಕೆಲಸ ಮಾಡಿಕೊಂಡಿದ್ದಾನೆ.

ಕಳೆದ ಸೆ. 2 ರಂದು ಆತ  ಬೆಳಗ್ಗೆ ಮನೆಯಿಂದ ಹೊರ ಹೋದಾತ ವಾಪಸ್ ಬಂದಿಲ್ಲ ಎಂದು ದಿನೇಶ್ ಗುಂಡೂರಾವ್ ಆಪ್ತ ಸಹಾಯಕರಿಂದ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ದೂರು ದಾಖಲಾದ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡ ಸಂಜಯನಗರ  ಪೊಲೀಸರು ಸಂಜು ಶರ್ಮಾ ಪತ್ತೆಗೆ ತೀವ್ರ ಶೋಧ ಕೈಗೊಂಡಿದ್ದಾರೆ.

Join Whatsapp