ಮಂಡ್ಯ: ಮಾವಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 16 ವರ್ಷದ ಬಾಲಕ ಸಾವು

Prasthutha|

ಮಂಡ್ಯ: ಮಾವಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 16 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಸಂಭವಿಸಿದೆ.

- Advertisement -

ಮಾವಿನ ಕಾಯಿ ಕೀಳಲು ಮರದ ಮೇಲೆ ಏರಿದ ಸಂಜಯ್ ಮರದಲ್ಲಿದ್ದ ಸ್ವಲ್ಪ ಹೊತ್ತಿನಲ್ಲಿಯೃ ಮೃತಪಟ್ಟಿದ್ದಾನೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಹಲಗೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp