ಮಂಡ್ಯ: ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಸಂಬಂಧ ಸಂಘಪರಿವಾರ ಕರೆ ನೀಡಿದ್ದ ಫೆ.9ರ ಮಂಡ್ಯ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ. ಈ ಮೂಲಕ ಸಂಘಪರಿವಾರಕ್ಕೆ ತೀವ್ರ ಮುಖಭಂಗವಾಗಿದೆ.
ಕೆರಗೋಡು ಧ್ವಜ ವಿವಾದಕ್ಕೆ ಸಂಬಂಧಿಸಿದ ವಿಚಾರಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ಮಂಡ್ಯನಗರದ ಜನತೆ ಹಾಗೂ ಅಂಗಡಿ ಮುಂಗಟ್ಟುಗಳ ವ್ಯಾಪಾರಿಗಳು ಎಂದಿನಂತೆ ಅಂಗಡಿಗಳನ್ನು ತೆರೆದು ವಾಣಿಜ್ಯ ಚಟುವಟಿಕೆಗಳನ್ನು ನಡೆಸಿದರು.
ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ದಿನಸಿ ಅಂಗಡಿಗಳು ಸೇರಿದಂತೆ ಇನ್ನಿತರೆ ವಾಣಿಜ್ಯ ಚಟುವಟಿಕೆಗಳು ಎಂದಿನಂತೆ ಯಾವುದೇ ಅಡೆತಡೆಗಳಿಲ್ಲದೇ ಕಾರ್ಯ ನಿರ್ವಹಿಸಿದವು.