ಕಾವೇರಿ ವಿವಾದ: ಇಂದು ಮಂಡ್ಯ ಬಂದ್​​

Prasthutha|

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ವಿಚಾರಕ್ಕೆ ಸಂಬಂಧಿಸಿ ಇಂದು ಮಂಡ್ಯ ನಗರ ಬಂದ್​ಗೆ ರೈತ ಹಿತರಕ್ಷಣಾ ಸಮಿತಿ ಕರೆ ಕೊಟ್ಟಿದ್ದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ಮಂಡ್ಯ ನಗರ ಬಂದ್ ಆಗಲಿದೆ.

- Advertisement -

ಆಟೋ, ಖಾಸಗಿ ಬಸ್, ಶಾಲಾ ಕಾಲೇಜುಗಳ ಬಂದ್​ಗೂ ಮನವಿ ಮಾಡಲಾಗಿದೆ. ಇಂದು ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲಿನ ಬೂತ್​ ಮಾತ್ರ ಓಪನ್ ಇರಲಿದೆ. ನಗರದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಂಜಯ ವೃತ್ತ, ಮಹಾವೀರ ವೃತ್ತ, ವಿವಿ ರೋಡ್, ಡಬಲ್ ರೋಡ್ ಸೇರಿ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ.

ಮಂಡ್ಯ ನಗರದಾದ್ಯಂತ ಇಂದು ಬೈಕ್ ರ್ಯಾಲಿ ನಡೆಸಲು ರೈತರು ಪ್ಲ್ಯಾನ್ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ಮಂಡ್ಯದಲ್ಲಿ ರೈತರ ಪ್ರತಿಭಟನೆಗೆ ಜೆಡಿಎಸ್​, ಬಿಜೆಪಿ ನಾಯಕರು ಸಾಥ್​​​​ ನೀಡಲಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿ ನಾಯಕ ಸಿ.ಟಿ.ರವಿ ಭಾಗಿಯಾಗಲಿದ್ದಾರೆ.

- Advertisement -

ಬೆಂಗಳೂರಲ್ಲಿ ಇಂದು ವಿವಿಧೆಡೆ ಪ್ರತಿಭಟನೆ

ಬೆಂಗಳೂರಿನಲ್ಲಿ ಇಂದು ಕಾವೇರಿ ನದಿ ನೀರಿಗಾಗಿ ಸರಣಿ ಪ್ರತಿಭಟನೆ ನಡೆಯಲಿವೆ. ಕನ್ನಡಪರ ಸಂಘಟನೆಗಳು ಶನಿವಾರ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿವೆ.  ಬೆಳಗ್ಗೆ 10.30ಕ್ಕೆ ಕರವೇ ಶಿವರಾಮೇಗೌಡ ಬಣ ಮಲ್ಲೇಶ್ವರಂನ ಸಂಪಿಗೆ ರಸ್ತೆಯ ಕುವೆಂಪು ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿದೆ. ಇದರಲ್ಲಿ ನೂರಾರು ಕರವೇ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.  ಬೆಳಗ್ಗೆ 10 ಗಂಟೆಗೆ ಕರವೇ ಪ್ರವೀಣ್ ಶೆಟ್ಟಿ ಬಣ ಅತ್ತಿಬೆಲೆ ಬಳಿ ಕರ್ನಾಟಕ-ತಮಿಳುನಾಡು ಗಡಿ ಬಂದ್ ಮಾಡಿ ಧರಣಿ ನಡೆಸಲಿದೆ. ಬೆಳಿಗ್ಗೆ 11.30ಕ್ಕೆ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಹೋರಾಟ ನಡೆಸಲಿದೆ.

Join Whatsapp