3 ತಿಂಗಳಲ್ಲಿ ಮಂಡ್ಯ ಕ್ಯಾನ್ಸರ್ ಆಸ್ಪತ್ರೆ ಕೆಲಸ ಮುಗಿಬೇಕು: ಶರಣಪ್ರಕಾಶ್ ಪಾಟೀಲ್ ತಾಕೀತು

Prasthutha|

ಮಂಡ್ಯ: ಮಿಮ್ಸ್ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಗಳು 3 ತಿಂಗಳೊಳಗಾಗಿ ಪೂರ್ಣಗೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಆರ್ ಪಾಟೀಲ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

- Advertisement -

ಮಂಡ್ಯದ ಮಿಮ್ಸ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಪಾಟೀಲ್, ಕ್ಯಾನ್ಸರ್ ಆಸ್ಪತ್ರೆಯ ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸವೇಕು. ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾದಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು. ಅಷ್ಟರಲ್ಲಿ ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.



Join Whatsapp