ಮಂಡ್ಯ | ನಾಗಮಂಗಲದಲ್ಲಿ ಭುಗಿಲೆದ್ದ ಗಲಭೆ: ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ

Prasthutha|

- Advertisement -

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣಪತಿ ಮೆರವಣಿಗೆಯ ವೇಳೆ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕ್ಕೇರಿದೆ.

ಮೆರವಣಿಗೆ ಮೈಸೂರು ರಸ್ತೆಗೆ ಬಂದಾಗ, ಹಿಂದೂ ಯುವಕರು “ಜೈ ಶ್ರೀರಾಮ್” ಘೋಷಣೆ ಕೂಗುತ್ತಿದ್ದರೆ, ಮುಸ್ಲಿಂ ಯುವಕರು “ಅಲ್ಲಾಹು ಅಕ್ಬರ್” ಎಂದು ಕೂಗುತ್ತಿದ್ದರು. ಈ ವೇಳೆ ಕಲ್ಲು, ಬಾಟಲಿ ತೂರಾಟ ನಡೆಯಿತು.‌ ಜನರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ.

- Advertisement -

144 ಸೆಕ್ಷನ್ ಜಾರಿ: ಈವರೆಗೆ 28 ಮಂದಿಯ ಬಂಧನ

ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದಲ್ಲದೆ ಹಲವು ಅಂಗಡಿಗಳು, ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದರು.

ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಸಮುದಾಯದ 28 ಮಂದಿಯನ್ನು ಬಂಧಿಸಿ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಯ ಬಳಿಕ ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ.



Join Whatsapp