ಪ್ರಜ್ವಲ್ ರೇವಣ್ಣ ವಿರುದ್ಧ ಸಿಎಂ ಗೆ ಪತ್ರ ಬರೆದ ಮನೇಕಾ ಗಾಂಧಿ !

Prasthutha|

ಹಾಸನ: ಅರಣ್ಯ ಇಲಾಖೆಗೆ ಸಂಬಂಧಪಟ್ಟ ಪ್ರಕರಣವೊಂದರಲ್ಲಿ ಆರೋಪಿಗಳನ್ನು ರಕ್ಷಿಸಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಮನೇಕಾ ಗಾಂಧಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಹಾಸನ ತಾಲೂಕಿನ ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಮತ್ತು ತಮ್ಮಯ್ಯ ಎಂಬುವರು ಅಕ್ರಮವಾಗಿ ವಿದ್ಯುತ್ ಹರಿಸಿ ಒಂಟಿ ಸಲಗವನ್ನು ಕೊಂದು, ಅದರ ದಂತವನ್ನು ದೋಚಿ ಹೂತು ಹಾಕಿದ್ದರು. ನಂತರ ದಂತವನ್ನು ಮಾರಾಟ ಮಾಡುವ ವೇಳೆ ಕಳೆದ ಮಾರ್ಚ್ 19 ರಂದು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.

ಆರೋಪಿಗಳು ಸಂಸದ ಪ್ರಜ್ವಲ್ ರೇವಣ್ಣ ಪಾರ್ಟಿಯ ಬೆಂಬಲಿಗರು ಎಂಬ  ಕಾರಣಕ್ಕೆ ಅವರ ಪರವಾಗಿ ಸಂಸದರ ಒತ್ತಡ ಹೇರುತ್ತಿದ್ದಾರೆ ಎಂದು ಸಂಸದೆ ಹಾಗೂ ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮನೇಕಾ ಗಾಂಧಿ ಅವರು ಸಿಎಂ ಬೊಮ್ಮಾಯಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -

ಜೊತೆಗೆ ಆರೋಪಿಗೆ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯಾಧಿಕಾರಿ ಭಾರೀ  ಭ್ರಷ್ಟಾಚಾರ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣವನ್ನು ವರ್ಗಾಯಿಸಲು ಸಿ.ಕೆ. ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಪ್ರಜ್ವಲ್ ರೇವಣ್ಣ ಅವರು ಪದೇಪದೆ ಒತ್ತಡ ಹಾಕಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಮಧ್ಯಪ್ರವೇಶಿಸಿ, ನಿಷ್ಪಕ್ಷಪಾತ ರೀತಿಯಲ್ಲಿ ತನಿಖೆ ನಡೆಸಲು ಸೂಚನೆ ನೀಡುವಂತೆ ಒತ್ತಾಯಿಸಿದ್ದಾರೆ.

Join Whatsapp