ಬೆಳಗಾವಿ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಜಯಭೇರಿ

Prasthutha|

ಬೆಳಗಾವಿ : ಬೆಳಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 4,35,202 ಮತ ಪಡೆಯುವ ಮೂಲಕ ಜಯಭೇರಿ ಭಾರಿಸಿದ್ದಾರೆ.

- Advertisement -

ಆರಂಭದಿಂದ ಹಿನ್ನಡೆ ಅನುಭವಿಸುತ್ತಾ ಬಂದಿದ್ದ ಸತೀಶ್ ಜಾರಕಿಹೊಳಿ ನಂತರ ರೋಚಕ ತಿರುವಿನಿಂದ ಬಿಜೆಪಿ ಅಭ್ಯರ್ಥಿಯನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿದ್ದರು. ಬಿಜೆಪಿ ಅಂತಿಮವಾಗಿ 435202 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 4,32,299 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ.

ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಆರಂಭದಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಮುನ್ನಡೆ ಸಾಧಿಸಿದ್ದರು. ನಂತರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕೊನೆಯ ಸುತ್ತಿನವರೆಗೂ ಮುನ್ನಡೆಯನ್ನು ಕಾಯ್ದುಕೊಂಡೇ ಬಂದಿದ್ದರು. ಕ್ಲೈ ಮ್ಯಾಕ್ಸ್ ಹಂತದಲ್ಲಿ ಮುನ್ನಡೆಯನ್ನು ಪಡೆದ ಬಿಜೆಪಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

Join Whatsapp