ನಿಲ್ಲದ ಮಳೆ: ದ.ಕ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆಯೂ ರಜೆ

Prasthutha|

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯುಸಿ, ಕಾಲೇಜುಗಳಿಗೆ ನಾಳೆಯೂ ( ಜುಲೈ 7) ರಜೆ ಘೋಷಿಸಲಾಗಿದೆ.

- Advertisement -

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಗುರುವಾರ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸತತವಾಗಿ ಕಳೆದ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದ್ದು, ಮಂಗಳವಾರ, ಬುಧವಾರ ಕೂಡ ರಜೆ ನೀಡಲಾಗಿತ್ತು. ಇಂದು ಸಂಜೆ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರಿಂದ ಮತ್ತೆ ಗುರುವಾರ ಕೂಡ ರಜೆ ನೀಡಲಾಗಿದೆ.



Join Whatsapp