Home ಕರಾವಳಿ ಮಂಗಳೂರು| ಬಸ್ಸು ಚಾಲಕನ ನಿರ್ಲಕ್ಷ್ಯ: 12 ವರ್ಷದ ಮಗು ಸ್ಥಳದಲ್ಲೇ ಸಾವು

ಮಂಗಳೂರು| ಬಸ್ಸು ಚಾಲಕನ ನಿರ್ಲಕ್ಷ್ಯ: 12 ವರ್ಷದ ಮಗು ಸ್ಥಳದಲ್ಲೇ ಸಾವು

ಮಂಗಳೂರು: ಚಾಲಕನ ನಿರ್ಲಕ್ಷ್ಯದಿಂದ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು 12 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಲಾಲ್‌ಬಾಗ್ ಬಳಿ ನಡೆದಿದೆ.


ಮಂಗಳೂರು – ಕಿನ್ನಿಗೋಳಿ – ಕಟೀಲು –ನಡುವೆ ಸಂಚರಿಸುವ ಖಾಸಗಿ ಬಸ್ಸಿನ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಈ ದುರ್ಘಟನೆಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ನಗರದಲ್ಲಿ ಖಾಸಗೀ ಬಸ್ಸುಗಳ ಟೈಂ ಕೀಪಿಂಗ್ ಭರದಲ್ಲಿ ನಡೆಯುತ್ತಿರುವ ಅತಿವೇಗ ಮತ್ತು ಪೈಪೋಟಿಯಿಂದಲೇ ಇಂತಹ ಅಪಘಾತಗಳು ನಡೆಯುತ್ತಿವೆ ಎಂಬ ಆರೋಪಗಳು ನಗರದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ.

Join Whatsapp
Exit mobile version