ಮಂಗಳೂರು: 1,256 ಮಂದಿ ‘ರೌಡಿ ಶೀಟ್‌’ನಿಂದ ಮುಕ್ತ

Prasthutha: December 16, 2021

ಮಂಗಳೂರು: ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ‘ರೌಡಿ ಶೀಟ್‌’ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದ 1,256 ಮಂದಿಯನ್ನು ಮುಕ್ತಗೊಳಿಸಲಾಗಿದೆ’ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ಹೇಳಿದರು.

ಮಂಗಳೂರು ನಗರ ಪೊಲೀಸ್‌ ವತಿಯಿಂದ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಪರಿವರ್ತನಾ ಸಭೆ’ಯಲ್ಲಿ ಅವರು ಮಾತನಾಡಿದರು. ‘3,263 ರೌಡಿಶೀಟರ್‌ಗಳ ಪೈಕಿ 1,256 ಮಂದಿಯನ್ನು ರೌಡಿಶೀಟ್‌ನಿಂದ ತೆರವು ಮಾಡಲಾಗಿದೆ. ಅವರಲ್ಲಿ 663 ಮಂದಿ ನ್ಯಾಯಾಲಯದಲ್ಲಿ ಪ್ರಕರಣ ಮುಕ್ತವಾದವರು. 523 ಮಂದಿ ಅಪರಾಧ ಚಟುವಟಿಕೆಯಲ್ಲಿ ಇಲ್ಲದವರು. ಸುಮಾರು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ವರ್ಷಗಳಿಂದ ಅಪರಾಧ ಕೃತ್ಯದಲ್ಲಿ ಭಾಗಿಯಾಗದೆ ಉತ್ತಮ ಜೀವನ ನಡೆಸುವವರನ್ನು ಪರಿಗಣಿಸಿ ರೌಡಿಶೀಟ್‌ನಿಂದ ತೆರವು ಮಾಡಲಾಗಿದೆ’ ಎಂದು ತಿಳಿಸಿದರು.


ಫಾದರ್ ಮ್ಲುಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರುಡಾಲ್ಫ್ ರವಿ ಡೇಸಾ ಮಾತನಾಡಿ, ‘ಪ್ರತಿಯೊಬ್ಬನ ಅಂತಃಕರಣವು ಸರಿ- ತಪ್ಪುಗಳನ್ನು ಪ್ರಾಮಾಣಿಕವಾಗಿ ಹೇಳುತ್ತದೆ. ಅಂತಃಕರಣದ ಎಚ್ಚರ ಪಾಲಿಸಿದರೆ ಜೀವನದಲ್ಲಿ ಎಡವಲು ಸಾಧ್ಯವಿಲ್ಲ. ನಮ್ಮ ಜೀವನ ರೂಪಿಸುವುದು ನಮ್ಮ ಕೈಯಲ್ಲಿದ್ದು, ಯಾರ ಪ್ರಭಾವಕ್ಕೂ ಮಣಿಯಬಾರದು’ ಎಂದರು. ‘ತುಳುನಾಡಿನ ಈ ಪುಣ್ಯಭೂಮಿ ಶಾಂತಿ, ಪ್ರೀತಿ, ಸೌಹಾರ್ದ, ಸಾಮರಸ್ಯಕ್ಕೆ ಹೆಸರುವಾಸಿ. ಆದರೆ, ಇತ್ತೀಚಿನ ದಿನಗಳಲ್ಲಿ ಸಮಾಜ ಅಶಾಂತಿಯತ್ತ ವಾಲುತ್ತಿರುವುದು ಬೇಸರದ ವಿಚಾರ. ಹಿಂಸೆಯನ್ನು ಹಿಂಸೆಯಿಂದಲೇ ನಾಶ ಮಾಡಲು ಸಾಧ್ಯವಿಲ್ಲ. ಗೆಳೆತನ ಮಾತ್ರ ವೈರತ್ವವನ್ನು ನಾಶ ಮಾಡಬಲ್ಲದು’ ಎಂದರು.

ಯುನಿಟಿ ಆಸ್ಪತ್ರೆ ಅಧ್ಯಕ್ಷ ಡಾ.ಸಿ.ಪಿ. ಹಬೀಬ್ ರೆಹಮಾನ್ ಮಾತನಾಡಿ, ‘ರೌಡಿ ಶೀಟರ್‌ಗಳಾಗಿದ್ದವರ ಪರಿವರ್ತನೆಗೆ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ. ಅದನ್ನು ಬಳಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು’ ಎಂದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!