Home ಕರಾವಳಿ ಮಂಗಳೂರು: 12,839 ಲೀಟರ್ ಮದ್ಯ ವಶಕ್ಕೆ

ಮಂಗಳೂರು: 12,839 ಲೀಟರ್ ಮದ್ಯ ವಶಕ್ಕೆ

ಮಂಗಳೂರು: 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 30 ರವರೆಗೆ ಜಿಲ್ಲೆಯಲ್ಲಿ 41,87,909 ರೂಪಾಯಿ ಮೌಲ್ಯದ 12,839 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರ ಸೇರಿದಂತೆ ಒಟ್ಟು 227 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

Join Whatsapp
Exit mobile version