Home ಟಾಪ್ ಸುದ್ದಿಗಳು ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ

ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಗರದ ಬಲ್ಮಠ ರೋಡ್ ಬಳಿ ನಡೆದಿದೆ.

ಮಣ್ಣಿನಡಿ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಬಿಹಾರ ಮೂಲದ ಕಾರ್ಮಿಕರಾಗಿದ್ದು ಓರ್ವನನ್ನು ಮಣ್ಣಿ ನಡಿ ಯಿಂದ ರಕ್ಷಿಸಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯ ಮುಂದುವರಿದಿದ್ದು ಮಳೆಯಿಂದ ಅಡ್ಡಿಯುಂಟಾಗಿದೆ.

Join Whatsapp
Exit mobile version