ಮಂಗಳೂರು | ಪ್ರತಿಷ್ಠಿತ ಕಾಲೇಜಿನಲ್ಲಿ ಲಿಪ್ ಲಾಕ್: 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Prasthutha|

- Advertisement -

ಮಂಗಳೂರು: ಕಿಸ್ಸಿಂಗ್ ಚಾಲೆಂಜ್ ನಡೆಸಿ ಆ ವೀಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ‌ಘಟನಾ ಸ್ಥಳದಲ್ಲಿದ್ದ ಎಲ್ಲಾ 8 ವಿದ್ಯಾರ್ಥಿಗಳ ಮೇಲೆ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

- Advertisement -

ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಅಪಾರ್ಟ್ಮೆಂಟ್ ಒಂದರಲ್ಲಿ ಕಿಸ್ಸಿಂಗ್ ಚಾಲೆಂಜ್ ನಡೆಸಿದ್ದು, ಬಳಿಕ ಈ ವೀಡಿಯೋ ವನ್ನು ವೈರಲ್ ಮಾಡಿದ್ದರು. ಘಟನೆ ಆರು ತಿಂಗಳ ಹಿಂದೆ ನಡೆದಿದ್ದರೂ, ವೀಡಿಯೋ ಮಾತ್ರ ಇತ್ತೀಚಿಗೆ ವೈರಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತರು, ವೀಡಿಯೋ ಮಾಡಿದ್ದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಅಲ್ಲದೇ ವಿದ್ಯಾರ್ಥಿನಿ ಜೊತೆ ದೈಹಿಕ ಸಂಬಂಧ ಬೆಳೆಸಿ ಆ ವೀಡಿಯೋ ವನ್ನೂ ವೈರಲ್ ಮಾಡಿದ್ದರು.

ಘಟನಾ ಸ್ಥಳದಲ್ಲಿ 8 ವಿದ್ಯಾರ್ಥಿಗಳು ಮತ್ತು ಮೂವರು ವಿದ್ಯಾರ್ಥಿನಿಯರಿದ್ದು, ಈ ಪೈಕಿ 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.



Join Whatsapp