ಮಂಗಳೂರು: SDM ಡಿಗ್ರಿ ಕಾಲೇಜಿನಲ್ಲಿ ಖಾಲಿ ಪೇಪರ್ ಗೆ ಸಹಿ ಹಾಕಿಸಿಕೊಂಡು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಧರಿಸದಂತೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಕಾಲೇಜಿನ ಕಚೇರಿಗೆ ಕರೆಸಿ ಖಾಲಿ ಪೇಪರ್ ಗೆ ಸಹಿ ಹಾಕುವಂತೆ ಒತ್ತಾಯಿಸಲಾಗಿದೆ. ಕೆಲವು ವಿದ್ಯಾರ್ಥಿನಿಯರ ಸಹಿ ಪಡೆದ ನಂತರ ಕಾಲೇಜಿನಲ್ಲಿ ಇನ್ನು ಮುಂದೆ ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಬೋರ್ಡ್ ಹಾಕಿದ್ದಾರೆ ಎಂದು ಕಾಲೇಜಿನ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಕಾಲೇಜಿನಲ್ಲಿ ಹಿಜಾಬ್ ಧರಿಸುವತಿಲ್ಲ. ಒಂದು ವೇಳೆ ಹಿಜಾಬ್ ಹಾಕಿಕೊಂಡು ಬಂದರೆ ಟಿಸಿ ಕೊಟ್ಟು ಮನೆಗೆ ಕಳುಹಿಸುತ್ತೇವೆ ಎಂದು ಆಡಳಿತ ಮಂಡಳಿಯವರು ಬೆದರಿಕೆ ಹಾಕಿದ್ದಾರೆ ಎಂಬ ದೂರು ಕೇಳಿ ಬಂದಿದೆ.
ಈ ನಡುವೆ ಕೆಲವು ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದು ಗಲಭೆ ಸೃಷ್ಟಿಸುವ ಸಂಚು ರೂಪಿಸಿದ್ದು ವಾಟ್ಸಾಪ್ ಚರ್ಚೆಗಳಲ್ಲಿ ಬಹಿರಂಗವಾಗಿತ್ತು.