ಮಂಗಳೂರು: ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ ಘಟನೆ ಸುರತ್ಕಲ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್(21) ಬಂಧಿತ ಆರೋಪಿ. ಕಲಬುರಗಿ ಮೂಲದವನಾದ ಪವನ್ ಬಜಪೆಯಲ್ಲಿ ವಾಸಿಸುತ್ತಿದ್ದಾನೆ. ಸ್ಕ್ಯಾನಿಂಗ್’ಗೆ ಹೋಗುವ ಮುನ್ನ ಬಟ್ಟೆ ಬದಲಾಯಿಸುವ ಆಸ್ಪತ್ರೆ ಕೂಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಎನ್ನಲಾಗಿದೆ.
ಸ್ಕ್ಯಾನಿಂಗ್’ಗೆ ಬಂದಿದ್ದ ಯುವತಿಯೊಬ್ಬಳು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ. ಕೂಡಲೇ ಆಕೆ ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ತಿಳಿದು ಬಂದಿದೆ.