ಮಂಗಳೂರು: ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು

Prasthutha|


ಮಂಗಳೂರು: ವಿಶ್ವ ಹಿಂದೂ ಪರಿಷತ್ನ ದ.ಕ. ಜಿಲ್ಲಾ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಜಾತ್ರೆಯ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

- Advertisement -

ಅ.16ರಂದು ಶರಣ್ ಪಂಪ್ವೆಲ್ ತನ್ನ ಬೆಂಬಲಿಗರೊಂದಿಗೆ ಶ್ರೀ ಮಂಗಳಾದೇವಿ ದೇವಸ್ಥಾನ ವಠಾರದಲ್ಲಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜಗಳನ್ನು ಹಾಕಿ, ಭಕ್ತರು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ವ್ಯಾಪಾರಿಗಳ ಅಂಗಡಿಗಳಿಂದ ಮಾತ್ರ ಪಡೆದುಕೊಳ್ಳುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದನು. ಈ ಕೃತ್ಯವು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿದೆ. ಅದರಂತೆ ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸ್ಸೈ ಮನೋಹರ್ ಪ್ರಸಾದ್ ರವರ ದೂರಿನ ಮೇಲೆ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

Join Whatsapp