ಮಂಗಳೂರು: ಮಂಗಳೂರು ಪೊಲೀಸ್ ಆಯುಕ್ತರು ಮೂವರು ಕ್ರಿಮಿನಲ್‌ಗಳ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಉಳ್ಳಾಲ ಕೋಟೆಪುರದ ಮೊಹಮ್ಮದ್ ಕಬೀರ್ ಆಲಿಯಾಸ್ ಚಬ್ಬಿ (31), ಗುರುಪುರ ಮಠದಗುಡ್ಡೆಯ ನವಾಝ್(30) ಮತ್ತು ಶಕ್ತಿನಗರದ ಜಯ ಪ್ರಶಾಂತ್ (30) ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಗೊಂಡವರು.
ಈ ಹಿಂದೆ ಮೊಹಮ್ಮದ್ ಕಬೀರ್ ಒಂದು ಕೊಲೆ ಪ್ರಕರಣ, 3 ಕೊಲೆಯತ್ನ ಪ್ರಕರಣ ಸೇರಿದಂತೆ 14 ಅಪರಾಧ ಪ್ರಕರಣಗಲ್ಲಿ ಭಾಗಿಯಾಗಿದ್ದ. ನವಾಜ್ ವಿರುದ್ಧ ಬಜಪೆ, ಕಾವೂರು, ಮಂಗಳೂರು ಗ್ರಾಮಾಂತರ, ಮಂಗಳೂರು ಪೂರ್ವ ಮತ್ತು ಬರ್ಕೆ ಠಾಣೆಗಳಲ್ಲಿ ಒಂದು ಕೊಲೆ, 1 ಕೊಲೆಯತ್ನ ಸೇರಿದಂತೆ 8 ಪ್ರಕರಣಗಳು ದಾಖಲಾಗಿವೆ. ಜಯಪ್ರಶಾಂತ್ ವಿರುದ್ಧ 3 ಗಲಭೆ, 1 ಕೊಲೆಯತ್ನ ಸೇರಿದಂತೆ 8 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.