Home ಕರಾವಳಿ ಮಂಗಳೂರು: ದುಷ್ಕರ್ಮಿಗಳ ತಂಡದಿಂದ ವ್ಯಕ್ತಿಗೆ ಚೂರಿ ಇರಿತ

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ವ್ಯಕ್ತಿಗೆ ಚೂರಿ ಇರಿತ

ಮಂಗಳೂರು: ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದ ಘಟನೆ ನಗರದ ಹೊರವಲಯ ಎದುರುಪದವಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ.


ಬಾಗಲಕೋಟೆ ಮೂಲದ ನಿಂಗಣ್ಣ ಎಂಬುವವರು ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕುಡಿದ ಮತ್ತಿನಲ್ಲಿ ನಿಂಗಣ್ಣ ಹಾಗೂ ಗುಂಪೊಂದರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಚೂರಿ ಇರಿತದವರೆಗೆ ತಲುಪಿದೆ ಎಂದು ಹೇಳಲಾಗಿದೆ.


ಗಾಯಾಳು ನಿಂಗಣ್ಣರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಕಾವೂರು ಪೊಲೀಸರು ಭೇಟಿ ನೀಡಿದ್ದಾರೆ.

Join Whatsapp
Exit mobile version