Home ಕರಾವಳಿ ಮಂಗಳೂರು: ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ| ಅವ್ಯವಸ್ಥೆಯ ವಿರುದ್ಧ ಆಕ್ರೋಶ

ಮಂಗಳೂರು: ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ| ಅವ್ಯವಸ್ಥೆಯ ವಿರುದ್ಧ ಆಕ್ರೋಶ

ಮಂಗಳೂರು: ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕ ಅಗೆಯಲ್ಪಟ್ಟ ಗುಂಡಿಗೆ ಸೋಮವಾರ ಸಂಜೆ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದಿದ್ದು, ಅವ್ಯಸ್ಥೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.   

ಗುಂಡಿಗೆ ಬಿದ್ದ ಮಹಿಳೆಯನ್ನು ಸ್ಥಳಿಯರು ಮೇಲಕ್ಕೆತ್ತಿ ರಕ್ಷಣೆ ಮಾಡಿದ್ದಾರೆ. ಮಹಿಳೆಯು ತನ್ನ ಪತಿಯೊಂದಿಗೆ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಮಗಾರಿಯನ್ನು ವಿಳಂಬ ಮಾಡದೆ ಜನನಿಬಿಡ ಪ್ರದೇಶದಲ್ಲಿ ತೋಡಲಾಗಿರುವ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚುವಂತೆ ಸಾರ್ವಜನಿಕರು ಕೇಳಿಕೊಂಡಿದ್ದಾರೆ.

Join Whatsapp
Exit mobile version