ಮಂಗಳೂರು | ಮೂರು ಕಾರು, ಬೈಕ್ ನಡುವೆ ಭೀಕರ ಅಪಘಾತ: ಹಲವು ಮಂದಿ ಗಂಭೀರ

Prasthutha|

- Advertisement -

ಮಂಗಳೂರು: ಮೂರು ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲಾಪಿನಲ್ಲಿ ನಡೆದಿದೆ.

ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಕಾರುಗಳ ನಡುವಿನ ರೇಸ್ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.

I 20 ಕಾರು ಮತ್ತು ಇನೋವಾ ಕಾರುಗಳ ಮದ್ಯೆ ರೇಸ್ ನಡೆದಿದ್ದು, ಇನೋವಾ ಕಾರು ಪರಾರಿಯಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Join Whatsapp