ಮಂಗಳೂರು: ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಘಟನೆ ನಗರದ ಲೇಡಿಹಿಲ್ ಬಳಿ ನಡೆದಿದೆ.
ಇಂದು ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದೆ.
ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ವಾತಿ (26), ಹಿತ್ನವಿ (16), ಕೃತಿಕಾ(16) ಮತ್ತು ಯತಿಕಾ(12) ರಸ್ತೆಗೆ ಅಪ್ಪಳಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
5 ಮಂದಿ ಮಹಿಳೆಯರು ಮಂಗಳೂರು ಕಾರ್ಪೋರೇಷನ್ ಈಜುಕೊಳದ ಬಳಿ ಲೇಡಿಹಿಲ್ ನಿಂದ ಮಣ್ಣಗುಡ್ಡ ಜಂಕ್ಷನ್ ಕಡೆಗೆ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಅದೇ ವೇಳೆ ಮಣ್ಣಗುಡ್ಡ ಜಂಕ್ಷನ್ ನಿಂದ ಲೇಡಿಹಿಲ್ ಕಡೆಗೆ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಅತೀ ವೇಗದಲ್ಲಿ ಬಂದ ಕಾರು ಐವರಿಗೂ ಢಿಕ್ಕಿಯಾಗಿದೆ.