ಮಂಗಳೂರು: ಸೌದಿ ಅರೇಬಿಯಾದ ದಮ್ಮಾಮ್‌ಗೆ ಹೊರಟಿದ್ದ ಏರ್ ಇಂಡಿಯಾದಲ್ಲಿ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.
ಮಂಗಳೂರು- ದಮಾಮ್ (ಸೌದಿ ಅರೇಬಿಯಾ) ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಜೆ ಏಳು ಗಂಟೆಗೆ ಟೇಕ್ ಆಫ್ ಆಗಬೇಕಿತ್ತು.
ಆದರೆ, ತಾಂತ್ರಿಕ ತೊಂದರೆ ಕಂಡುಬಂದ ಹಿನ್ನೆಲೆಯಲ್ಲಿ ಒಂದು ಗಂಟೆ ತಡವಾದರೂ ವಿಮಾನ ಇನ್ನೂ ಹಾರಾಟ ನಡೆಸಿಲ್ಲ. ಇದರಿಂದ ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ 160 ಪ್ರಯಾಣಿಕರು ಕಂಗಾಲಾಗಿದ್ದಾರೆ.
45 ನಿಮಿಷಗಳ ಕಾಲ ಪ್ರಯಾಣಿಕರು ವಿಮಾನದೊಳಗಿದ್ದತು , ಬಳಿಕ ಅವರನ್ನು ಕೆಳಗಿಳಿಸಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ನಡುವೆ ನಿಲ್ದಾಣದ ರ್ಯಾಂಪ್‌ನಲ್ಲಿ ಪ್ರಯಾಣಿಕರು ಕಾದು ಕುಳಿತಿದ್ದಾರೆ.
ಪ್ರಯಾಣಿಕರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಒಂದು ಗಂಟೆ ತಡವಾದರೂ ಸರಿಯಾದ ಮಾಹಿತಿ ನೀಡುತ್ತಿಲ್ಲ, ಕೇವಲ ತಾಂತ್ರಿಕ ತೊಂದರೆ ಎಂದು ತಿಳಿಸಿದ್ದಾರೆ. ವಿಮಾನ ಯಾವಾಗ ಹೊರಡಲಿದೆ ಎಂದು ಸ್ಪಷ್ಟ ಮಾಹಿತಿ ನೀಡಿಲ್ಲ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂಥಾ ಘಟನೆಗಳು ಮರುಕಳಿಸುತ್ತಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದ ಸಂಪರ್ಕ ಸೇರಿದಂತೆ ನಾನಾ ಕಾರಣಕ್ಕಾಗಿ ನಾಗರಿಕರು ಏರ್‌ಲೈನ್ಸ್ ಪ್ರಯಾಣ ಬಯಸುತ್ತಾರೆ. ಆದರೆ ವಿಮಾನಗಳ ಸಂಚಾರ ಪದೇ ಪದೆ ವಿಳಂಬದಿಂದ ಏರ್‌ಲೈನ್ಸ್ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.