ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: FIR ದಾಖಲು

Prasthutha|

- Advertisement -

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ ಐಆರ್ ದಾಖಲಾಗಿದೆ.

ಡಿಸೆಂಬರ್ 26ರಂದು ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ [email protected] ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಅದಾನಿ ಆಡಳಿತದ ಮಂಗಳೂರು ಏರ್ಪೋರ್ಟ್ ಸಂಸ್ಥೆ ಬಜಪೆ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿ ಪಡೆದುಕೊಂಡು ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದೆ.

Join Whatsapp