ಮಂಗಳೂರು ವಿಮಾನ ನಿಲ್ದಾಣ : ಒಳ ಉಡುಪಿನಲ್ಲಿ ಅಡಗಿಸಿಟ್ಟು 33 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ । ಓರ್ವನ ಸೆರೆ

Prasthutha|

ಮಂಗಳೂರು : ಒಳ ಉಡುಪಿನಲ್ಲಿ ಸುಮಾರು 33 ಲಕ್ಷ ಮೌಲ್ಯದ ಚಿನ್ನ ಸಾಗಾಟ ನಡೆಸುತ್ತಿದ್ದ ಓರ್ವನನ್ನು ಬಂಧಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನವನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಕೊಪ್ಪದ ಮೊಹಮ್ಮದ್ ಖಾಲಿದ್ (45) ಎಂದು ಗುರುತಿಸಲಾಗಿದೆ. ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದ ಆರೋಪಿಯನ್ನು ತಪಾಸಣೆ ನಡೆಸಿದ ಅಧಿಕಾರಿಗಳು ಅಕ್ರಮ ಚಿನ್ನವನ್ನು ಪತ್ತೆ ಹಚ್ಚಿದ್ದಾರೆ.

- Advertisement -

ವಿಶೇಷ ರೀತಿಯಲ್ಲಿ ಡಿಸೈನ್ ಮಾಡಲಾದ ಒಳ ಉಡುಪಿನಲ್ಲಿ ಪತ್ತೆಯಾದ 737 ಗ್ರಾಂ ಚಿನ್ನದ ಮೌಲ್ಯ 33,75,470 ರೂ. ಎಂದು ಅಂದಾಜಿಸಲಾಗಿದೆ.

- Advertisement -