Home ಕರಾವಳಿ ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಆಕ್ಷೇಪ | ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ

ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಆಕ್ಷೇಪ | ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ

ಮಂಗಳೂರು : ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ವಾರಕ್ಕೊಂದು ಪ್ರತಿಭಟನೆ ಆಯೋಜಿಸಲು ಮುಂದಾಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಹಸ್ತಾಂತರಿಸಿದ ಹಲವು ದಿನಗಳ ಬಳಿಕ, ಕಾಂಗ್ರೆಸ್ ಮುಖಂಡರು ಎಚ್ಚೆತ್ತುಕೊಂಡಿದ್ದಾರೆ. ಇದೀಗ ಮಾಜಿ ಶಾಸಕ ಅಭಯಚಂದ್ರ ಜೈನ್ ವಿಮಾನ ನಿಲ್ದಾಣ ನಿರ್ವಹಣೆ ಖಾಸಗೀಕರಣಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ ತೊಂದರೆ ನೀಡುತ್ತಿದೆ ಎಂಬುದು ಇಡೀ ದೇಶಕ್ಕೆ ಗೊತ್ತಾಗಬೇಕು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಅದಾನಿ ಸಂಸ್ಥೆಗೆ ನೀಡಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ವಾರಕ್ಕೊಂದು ಪ್ರತಿಭಟನೆ ನಡೆಸಲಾಗುವುದು” ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಯಚಂದ್ರ ಜೈನ್ ತಿಳಿಸಿದ್ದಾರೆ.

Join Whatsapp
Exit mobile version