ಮಂಗಳೂರು | ರಾಮನ ಬಗ್ಗೆ ಅವಹೇಳನ ಆರೋಪ: ವಿದ್ಯಾರ್ಥಿಗಳು, ಸಂಘಪರಿವಾರದ ಕಾರ್ಯಕರ್ತರಿಂದ ಪ್ರತಿಭಟನೆ, ಜೈ ಶ್ರೀರಾಮ್ ಘೋಷಣೆ

Prasthutha|

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ರಾಮನ ಬಗ್ಗೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು, ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -


ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.



Join Whatsapp