Home ಟಾಪ್ ಸುದ್ದಿಗಳು ಮಂಗಳೂರು | ರಾಮನ ಬಗ್ಗೆ ಅವಹೇಳನ ಆರೋಪ: ವಿದ್ಯಾರ್ಥಿಗಳು, ಸಂಘಪರಿವಾರದ ಕಾರ್ಯಕರ್ತರಿಂದ ಪ್ರತಿಭಟನೆ, ಜೈ ಶ್ರೀರಾಮ್...

ಮಂಗಳೂರು | ರಾಮನ ಬಗ್ಗೆ ಅವಹೇಳನ ಆರೋಪ: ವಿದ್ಯಾರ್ಥಿಗಳು, ಸಂಘಪರಿವಾರದ ಕಾರ್ಯಕರ್ತರಿಂದ ಪ್ರತಿಭಟನೆ, ಜೈ ಶ್ರೀರಾಮ್ ಘೋಷಣೆ

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ರಾಮನ ಬಗ್ಗೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು, ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.


ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.

Join Whatsapp
Exit mobile version