ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ ಎನ್’ಐಎಗೆ ವರ್ಗಾಯಿಸಿ ಸರ್ಕಾರ ಆದೇಶ

Prasthutha|

ಬೆಂಗಳೂರು: ಮಂಗಳೂರಿನ ಕಂಕನಾಡಿ ಸಮೀಪ ಇತ್ತೀಚೆಗೆ ನಡೆದ ಆಟೋ ರಿಕ್ಷಾ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಮುಂದಿನ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ- NIAಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು, UAPA ಕಾಯಿದೆ ಅನ್ವಯ ತನಿಖೆಯನ್ನು ನಡೆಸಲು ಶಿಫಾರಸು ಮಾಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.



Join Whatsapp