ಮಂಗಳೂರು: ಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ, ಹಿಂದುತ್ವ ಸಂಘಟನೆಯ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ.
ನಾಳೆ ಅವರಿಗೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದ್ದು, ಹಾಜರಾಗದಿದ್ದಲ್ಲಿ ಗಡಿಪಾರು ಮಾಡುವುದಾಗಿ ತಿಳಿಸಲಾಗಿದೆ.
ಅವಿನಾಶ್ ಪುರುಷರಕಟ್ಟೆ ಇವರನ್ನು ದಕ್ಷಿಣ ಕನ್ನಡ ಕರ್ನಾಟಕ ಪೊಲೀಸ್ ಕಾಯ್ದೆ- 1963 ಕಲಂ 55(ಎ) ಮತ್ತು (ಬಿ) ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ 24 ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆಗೆ ನಿಗದಿಪಡಿಸಲಾಗಿದೆ ಎಂದು ನೋಟಿಸಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ ನೀವು ಸ್ವತಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.