ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಝಿಕಾ ವೈರಸ್ ಕುರಿತು ಜಾಗೃತಿ ಸಭೆ

Prasthutha|

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಬಾಧಿಸದಂತೆ ಮತ್ತು ಝಿಕಾ ವೈರಸ್ ಕುರಿತು ಮುನ್ನೆಚ್ಚೆರಿಕೆ ವಹಿಸುವ ಸಲುವಾಗಿ ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಮುಂಜಾಗ್ರತಾ ಸಭೆ ಜರಗಿತು.

- Advertisement -

ಸಭೆಯಲ್ಲಿ ಮಾತನಾಡಿದ ತಾಲೂಕು ವೈದ್ಯಾಧಿಕಾರಿಯವರು ಮಲೇರಿಯಾ ಮತ್ತು ಡೆಂಗ್ಯೂಯನ್ನು ತಡೆಗಟ್ಟಲು ಮೊದಲು ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂ.ಪಿ.ಡಬ್ಲ್ಯೂ ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ಮನೆಯ ಸುತ್ತ ಮುತ್ತಲಿನಲ್ಲಿರುವ ತ್ಯಾಜ್ಯ ಮತ್ತು ಯಾವುದೇ ಬಿಸಾಡುವಂತಹ ವಸ್ತುಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಎನ್ನುವ ಮಾಹಿತಿಯನ್ನು ಒದಗಿಸಿದರು. ಇದನ್ನು ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸಾರ್ವಜನಿಕರು ಪಾಲಿಸಬೇಕು. ಇದರಿಂದ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಪಾಲಿಕೆಯ ಆಯುಕ್ತರಾದ ಶ್ರೀ ಅಕ್ಷಯ್ ಶ್ರೀಧರ್, ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ,  ಉಪ ಆಯುಕ್ತರು(ಆಡಳಿತ) ಸಂತೋಷ್ ಕುಮಾರ್,  ತಾಲೂಕು ವೈದ್ಯಾಧಿಕಾರಿ ಡಾ| ನವೀನ್ ಕುಲಾಲ್, ಪಾಲಿಕೆಯ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ, ಪಾಲಿಕೆಯ ಆರೋಗ್ಯ ವಿಭಾಗದ ಎಂ.ಪಿ.ಡಬ್ಲ್ಯೂ ಮೇಲ್ವಿಚಾರಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Join Whatsapp