ಮಂಗಳೂರು: ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.
ಜೂನ್ 29ರಂದು ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ. ಕಳೆದ 15 ದಿನಗಳಿಂದ ಮಂಗಳೂರು ನಗರದಲ್ಲಿ ಶಾಂತಿಸಭೆ ನಡೆಸುತ್ತಿದ್ದೇವೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ವ್ಯವಸ್ಥೆ ಮಾಡಿದ್ದೇವೆ. ದಿನದ 24 ಗಂಟೆಯೂ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಯಾವುದೇ ಸಂಘಟನೆ ಕಾನೂನು ಕೈಗೆತ್ತಿಕೊಂಡರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಗೋ ಸಾಗಾಟ ಕೇಸ್ ನಲ್ಲಿ ಭಾಗಿಯಾಗಿದ್ದವರ ಪಟ್ಟಿ ಮಾಡಿದ್ದೇವೆ. ಆಯಾಯ ಪೊಲೀಸ್ ಠಾಣೆಗಳಲ್ಲಿ ಅವರನ್ನು ಕರೆಸಿ ವಾರ್ನ್ ಮಾಡಿದ್ದೇವೆ ಎಂದು ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ.